Joshua 9:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.
Kannada BSI Bible 2016
ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.
Kannada Bible (KNCL) BSI 2016
ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.