Joshua 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹಳೆಯ ಪಾದರಕ್ಷೆಗಳನ್ನು ಮೆಟ್ಟಿಕೊಂಡರು; ಹಳೆಯ ಬಟ್ಟೆಗಳನ್ನು ಧರಿಸಿಕೊಂಡರು; ಒಣಗಿದ ಮತ್ತು ಕೆಟ್ಟುಹೋದ ರೊಟ್ಟಿಗಳನ್ನು ಕಟ್ಟಿಕೊಂಡರು. ಹೀಗೆ ಅವರು ಬಹುದೂರ ಪ್ರಯಾಣಮಾಡಿ ಬಂದವರಂತೆ ತೋರಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.
Kannada BSI Bible 2016
ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿ ಹರಿದ ಹಳೆಯ ಕೆರಗಳನ್ನು ಮೆಟ್ಟಿ ಹಳೆಯ ಬಟ್ಟೆಗಳನ್ನು ಹೊದೆದು ಒಣರೊಟ್ಟೀ ಚೂರುಗಳನ್ನು ಬುತ್ತೀ ಕಟ್ಟಿಕೊಂಡು
Kannada Bible (KNCL) BSI 2016
ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೇಪೆ ಹಾಕಿದ ಹಳೆಯದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು ಹಳೆಯ ಬಟ್ಟೆಗಳನ್ನು ತೊಟ್ಟುಕೊಂಡು, ಒಣಗಿ ಬೂಷ್ಟು ಹಿಡಿದ ರೊಟ್ಟಿಯನ್ನೂ ತೆಗೆದುಕೊಂಡರು.