Joshua 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
Kannada BSI Bible 2016
ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದು ಅವನಿಗೂ ಇಸ್ರಾಯೇಲ್ಯರಿಗೂ - ನಾವು ದೂರದೇಶದಿಂದ ಬಂದೆವು; ನೀವು ನಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳಿರಿ ಎಂದು ಹೇಳಿದರು.
Kannada Bible (KNCL) BSI 2016
ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು.