Joshua 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.
Kannada BSI Bible 2016
ಆಗ ಇಸ್ರಾಯೇಲ್‌ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು.