Jude 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Kannada BSI Bible 2016
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Kannada Bible (KNCL) BSI 2016
ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.