Jude 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.
Kannada BSI Bible 2016
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.
Kannada Bible (KNCL) BSI 2016
ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!