Jude 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.
Kannada BSI Bible 2016
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
Kannada Bible (KNCL) BSI 2016
ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.