Jude 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.
Kannada BSI Bible 2016
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
Kannada Bible (KNCL) BSI 2016
ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.