Jude 1:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
Kannada BSI Bible 2016
ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.
Kannada Bible (KNCL) BSI 2016
ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.