Jude 1:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,
Kannada BSI Bible 2016
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ
Kannada Bible (KNCL) BSI 2016
ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ