Jude 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
Kannada BSI Bible 2016
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
Kannada Bible (KNCL) BSI 2016
ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.