Jude 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
Kannada BSI Bible 2016
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.
Kannada Bible (KNCL) BSI 2016
ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.