Jude 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.
Kannada BSI Bible 2016
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.
Kannada Bible (KNCL) BSI 2016
ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.