Jude 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
Kannada BSI Bible 2016
ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೂ ಈ ಜನರು ಸ್ವಪ್ನಾವಸ್ಥೆಯಲ್ಲಿರುವವರಂತೆ ಅದೇ ರೀತಿಯಾಗಿ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ, ಮಹಾಪದವಿಯವರನ್ನು ದೂಷಿಸುತ್ತಾರೆ.
Kannada Bible (KNCL) BSI 2016
ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.