Jude 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.
Kannada BSI Bible 2016
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.
Kannada Bible (KNCL) BSI 2016
ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.