Judges 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರು ಯುದ್ಧ ಆರಂಭಿಸುವ ಮುನ್ನ ಕಾಲೇಬನು ಜನರಿಗೆ, “ಕಿರ್ಯತ್‌ಸೇಫೆರನ್ನು ಗೆದ್ದುಕೊಳ್ಳಬೇಕೆಂದು ನನ್ನ ಇಚ್ಛೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವನಿಗೆ ನಾನು ನನ್ನ ಮಗಳಾದ ಅಕ್ಷಾಳನ್ನು ಮದುವೆ ಮಾಡಿಕೊಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
Kannada BSI Bible 2016
ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿರ್ಯತ್‍ಸೇಫೆರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಲು
Kannada Bible (KNCL) BSI 2016
ಕಿರ್ಯತ್ ಸೇಫೆರನ್ನು ಹಿಡಿದುಕೊಳ್ಳುವವನಿಗೆ ತನ್ನ ಮಗಳು ‘ಅಕ್ಷಾ’ ಎಂಬಾಕೆಯನ್ನು ಕೊಟ್ಟು ಮದುವೆ ಮಾಡುವುದಾಗಿ ಕಾಲೇಬನು ಹೇಳಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಲೇಬನು, “ಕಿರ್ಯತ್ ಸೇಫೆರ ಮೇಲೆ ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.