Judges 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಕ್ಷಾಳು ಒತ್ನೀಯೇಲನ ಜೊತೆ ವಾಸಿಸಲು ಹೋದಳು. ಒತ್ನೀಯೇಲನು ಅಕ್ಷಾಳಿಗೆ,2 “ನಿನ್ನ ತಂದೆಯಿಂದ ಸ್ವಲ್ಪ ಭೂಮಿಯನ್ನು ಕೇಳು” ಎಂದು ಹೇಳಿದನು. ಅಕ್ಷಾಳು ತನ್ನ ತಂದೆಯ ಹತ್ತಿರ ಹೋದಳು. ಅವಳು ತನ್ನ ಕತ್ತೆಯ ಮೇಲಿಂದ ಇಳಿದಾಗ, “ನಿನಗೇನು ಬೇಕು?” ಎಂದು ಕಾಲೇಬನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
Kannada BSI Bible 2016
ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಭೂವಿುಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು ನಿನಗೇನು ಬೇಕೆಂದು ಆಕೆಯನ್ನು ಕೇಳಲು
Kannada Bible (KNCL) BSI 2016
ಆಕೆ ಬಂದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳುವಂತೆ ಗಂಡನನ್ನು ಪ್ರೇರೇಪಿಸಿದಳು. ಆಕೆ ಕತ್ತೆಯಿಂದ ಇಳಿಯುವಾಗ ಕಾಲೇಬನು, “ನಿನಗೇನು ಬೇಕು,” ಎಂದು ಕೇಳಲು ಅವಳು, “ನನ್ನನ್ನು ಬೆಂಗಾಡಿಗೆ ಕೊಟ್ಟುಬಿಟ್ಟಿರಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.