Judges 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
Kannada BSI Bible 2016
ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.
Kannada Bible (KNCL) BSI 2016
ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.