Judges 1:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು. (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
Kannada BSI Bible 2016
ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
Kannada Bible (KNCL) BSI 2016
ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.