Judges 1:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
Kannada BSI Bible 2016
ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಯವರು ಬೇತ್ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
Kannada Bible (KNCL) BSI 2016
ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.