Judges 1:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆಬುಲೂನ್ಯರ ಸಂಗಡವೂ ಹೀಗೆಯೇ ಆಯಿತು. ಕಿಟ್ರೋನ್ ಮತ್ತು ನಹಲೋಲ್ ನಗರಗಳಲ್ಲಿ ಕೆಲವು ಕಾನಾನ್ಯರು ವಾಸಮಾಡಿಕೊಂಡಿದ್ದರು. ಜೆಬುಲೂನ್ಯರು ಅವರನ್ನು ಆ ಪ್ರದೇಶದಿಂದ ಹೊರದೂಡಲಿಲ್ಲ. ಆ ಕಾನಾನ್ಯರು ಅಲ್ಲಿಯೇ ಉಳಿದುಕೊಂಡು ಜೆಬುಲೂನ್ಯರೊಂದಿಗೆ ವಾಸಮಾಡಿದರು. ಆದರೆ ಜೆಬುಲೂನ್ಯರು ಅವರನ್ನು ತಮ್ಮ ಗುಲಾಮರಂತೆ ಕೆಲಸಮಾಡಲು ಹಚ್ಚಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.
Kannada BSI Bible 2016
ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಬುಲೂನ್ಯರು ಕಿಟ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಅಟ್ಟಿಬಿಡಲಿಲ್ಲ. ಆದರೆ ಆ ಕಾನಾನ್ಯರು ಅವರಿಗೆ ದಾಸರಾಗಿ ಅವರ ಮಧ್ಯದಲ್ಲೇ ವಾಸಮಾಡುವವರಾದರು.
Kannada Bible (KNCL) BSI 2016
ಜೆಬುಲೂನ್ ಕುಲದವರು ಕಿಟ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಅಟ್ಟಿಬಿಡಲಿಲ್ಲ. ಆದರೆ ಆ ಕಾನಾನ್ಯರು ಅವರಿಗೆ ಗುಲಾಮರಾಗಿ ಅವರ ಮಧ್ಯದಲ್ಲೇ ವಾಸಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.