Judges 1:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮೋರಿಯರು ಹರ್‌ಹೆರೆಸ್ ಪರ್ವತ, ಅಯ್ಯಾಲೋನ್ ಮತ್ತು ಶಾಲ್ಬೀಮ್‌ಗಳಲ್ಲಿ ವಾಸಿಸಬೇಕೆಂದು ನಿರ್ಧರಿಸಿದರು. ತರುವಾಯ ಯೋಸೇಫ್ಯರು ಪ್ರಬಲರಾದರು. ಆಗ ಅವರು ಅಮೋರಿಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.
Kannada BSI Bible 2016
ತಾವು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅಮೋರಿಯರು ಹರ್‍ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸ ದೃಢಮಾಡಿದರು. ಆದರೆ ಯೋಸೇಫ್ಯರ ಹಸ್ತವು ಭಾರವಾದ ಮೇಲೆ ಅವರಿಗೆ ದಾಸರಾದರು.
Kannada Bible (KNCL) BSI 2016
ಹೀಗೆ ಅಮೋರಿಯರು ಹರ್ ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸಲು ನಿರ್ಧಾರಮಾಡಿದರು. ಆದರೆ ಜೋಸೆಫ್ ಕುಲದವರ ಪ್ರಭಾವ ಹೆಚ್ಚಾದ ಮೇಲೆ ಅವರಿಗೆ ಗುಲಾಮರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅಮೋರಿಯರು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.