Judges 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಯೆಹೂದ್ಯರು ಉಳಿದಿರುವ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಆ ಕಾನಾನ್ಯರು ಬೆಟ್ಟಪ್ರದೇಶ, ನೆಗೆವ್ ಮತ್ತು ಪಶ್ಚಿಮದ ಇಳಕಲಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
Kannada BSI Bible 2016
ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
Kannada Bible (KNCL) BSI 2016
ಅನಂತರ ಅವರು ಪರ್ವತಪ್ರದೇಶ, ದಕ್ಷಿಣಸೀಮೆ ಮತ್ತು ತಗ್ಗುಪ್ರದೇಶ ಇವುಗಳಿಗೆ ಹೋಗಿ ಅಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.