Judges 10:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
Kannada BSI Bible 2016
ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು.
Kannada Bible (KNCL) BSI 2016
ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು.