Judges 10:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.
Kannada BSI Bible 2016
ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳುಕೊಳ್ಳಲು ಇಸ್ರಾಯೇಲ್ಯರು ಕೂಡಿ ವಿುಚ್ಪೆಯಲ್ಲಿ ಪಾಳೆಯಮಾಡಿಕೊಂಡರು.
Kannada Bible (KNCL) BSI 2016
ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.