Judges 10:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು.12 ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.
Kannada BSI Bible 2016
ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರೀ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರಿನ ಗ್ರಾಮಗಳೆಂದು ಹೆಸರಿದೆ.
Kannada Bible (KNCL) BSI 2016
ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.