Judges 10:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.
Kannada BSI Bible 2016
ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.
Kannada Bible (KNCL) BSI 2016
ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.