Judges 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
Kannada BSI Bible 2016
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ಹಾಗೆಯೇ ಮಾಡುವೆವು; ಉಭಯತರ ಮಾತುಗಳಿಗೆ ಯೆಹೋವನೇ ಸಾಕ್ಷಿ ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು.