Judges 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಫ್ತಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶವನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
Kannada BSI Bible 2016
ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನನ್ನು - ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವದಕ್ಕೇನು ಕಾರಣ ಎಂದು ಕೇಳಿದನು.
Kannada Bible (KNCL) BSI 2016
ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧ ಮಾಡುವುದಕ್ಕೇನು ಕಾರಣ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಫ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವುದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು?” ಎಂದು ಹೇಳಿ ಕಳುಹಿಸಿದನು.