Judges 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿಕೊಡು’ ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿಹೋಗಲು ಅನುಮತಿಕೊಡಲಿಲ್ಲ. ತರುವಾಯ ಅವರು ಮೋವಾಬ್ಯರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಯರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಆದ್ದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.
Kannada BSI Bible 2016
ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ನಿನ್ನ ದೇಶವನ್ನು ದಾಟಿಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದದರಿಂದ ಅವರು ಕಾದೇಶಿನಲ್ಲಿಯೇ ನಿಂತರು.
Kannada Bible (KNCL) BSI 2016
ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ಹೋಗುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನು ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆ ಆಗಬೇಕು,’ ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದ್ದರಿಂದ ಇಸ್ರಾಯೇಲರು ಕಾದೇಶಿನಲ್ಲಿ ವಾಸಮಾಡಿದರು.