Judges 11:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
Kannada BSI Bible 2016
ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್ ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
Kannada Bible (KNCL) BSI 2016
ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.