Judges 11:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿಲ್ಯಾದನ ಹೆಂಡತಿಗೆ ಅನೇಕ ಜನ ಮಕ್ಕಳಿದ್ದರು. ಆ ಮಕ್ಕಳು ದೊಡ್ಡವರಾದ ಮೇಲೆ ಯೆಫ್ತಾಹನನ್ನು ಇಷ್ಟಪಡಲಿಲ್ಲ. ಯೆಫ್ತಾಹನು ತನ್ನ ಹುಟ್ಟೂರನ್ನು ಬಿಡುವಂತೆ ಆ ಮಕ್ಕಳು ಒತ್ತಾಯಮಾಡಿದರು. ಅವರು ಅವನಿಗೆ, “ನೀನು ನಮ್ಮ ತಂದೆಯ ಆಸ್ತಿಯಲ್ಲಿ ಯಾವ ಭಾಗವನ್ನೂ ಪಡೆಯಲಾರೆ. ನೀನು ವೇಶ್ಯೆಯ ಮಗ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Kannada BSI Bible 2016
ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಲ್ಯಾದನಿಗೆ ಹೆಂಡತಿಯಲ್ಲಿಯೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ - ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Kannada Bible (KNCL) BSI 2016
ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.