Judges 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದ್ದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
Kannada BSI Bible 2016
ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಯೆಹೋವನು ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವತಂತ್ರಿಸಿಕೊಂಡರು.
Kannada Bible (KNCL) BSI 2016
ಇಸ್ರಯೇಲರ ದೇವರಾದ ಸರ್ವೇಶ್ವರ ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.