Judges 11:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
Kannada BSI Bible 2016
ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರಿಗಿ ಗಿಲ್ಯಾದಿನ ವಿುಚ್ಪೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
Kannada Bible (KNCL) BSI 2016
ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.