Judges 11:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನ್ನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಆಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೇಲ್‌ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು.
Kannada BSI Bible 2016
ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ವಿುನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀವಿುನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲ್ಯರ ಮುಂದೆ ತಗ್ಗಿಸಲ್ಪಟ್ಟರು.
Kannada Bible (KNCL) BSI 2016
ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಅಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು.