Judges 11:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
Kannada BSI Bible 2016
ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು
Kannada Bible (KNCL) BSI 2016
ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.