Judges 11:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಫ್ತಾಹನ ಮಗಳು ಅವನಿಗೆ, “ನನ್ನ ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.
Kannada BSI Bible 2016
ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಅವನಿಗೆ - ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆ ಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು ಅಂದಳು.
Kannada Bible (KNCL) BSI 2016
ಆಕೆ ಅವನಿಗೆ, “ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದ ನಿನ್ನ ಬಾಯಿಂದ ಬಂದದ್ದನ್ನೇ ನೆರವೇರಿಸು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು.