Judges 11:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಫ್ತಾಹನು, “ಹೋಗು, ಹಾಗೆಯೇ ಮಾಡು” ಎಂದನು. ಯೆಫ್ತಾಹನು ಅವಳನ್ನು ಎರಡು ತಿಂಗಳುಗಳವರೆಗೆ ಕಳುಹಿಸಿಕೊಟ್ಟನು. ಯೆಫ್ತಾಹನ ಮಗಳು ಮತ್ತು ಆಕೆಯ ಗೆಳತಿಯರು ಬೆಟ್ಟಪ್ರದೇಶದಲ್ಲಿ ವಾಸಮಾಡಿದರು. ಅವಳು ಮದುವೆಯಾಗುವುದಿಲ್ಲ ಮತ್ತು ಮಕ್ಕಳನ್ನು ಹಡೆಯುವುದಿಲ್ಲ ಎಂಬ ಕಾರಣದಿಂದ ಅವರೆಲ್ಲರೂ ಗೋಳಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
Kannada BSI Bible 2016
ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ತಿಂಗಳ ತನಕ ಹೋಗಿ ಬಾ ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
Kannada Bible (KNCL) BSI 2016
ಆಕೆ ಸಖಿಯರ ಸಹಿತ ಗುಡ್ಡ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗಾಗಿ ಗೋಳಾಡಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ಎರಡು ತಿಂಗಳು ಹೋಗಿ ಬಾ,” ಎಂದು ಹೇಳಿ ಮಗಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿಯರ ಸಂಗಡ ಹೋಗಿ, ತನ್ನ ಕನ್ಯಾವಸ್ಥೆಗಾಗಿ ಬೆಟ್ಟದಲ್ಲಿ ಅತ್ತು,