Judges 11:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
Kannada BSI Bible 2016
9ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ತಿಂಗಳು ಕಳೆದನಂತರ ಆಕೆಯು ತಿರಿಗಿ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
Kannada Bible (KNCL) BSI 2016
ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.