Judges 11:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಗಿಲ್ಯಾದಿನ ಹಿರಿಯರಿಗೆ ಯೆಫ್ತಾಹನು, “ನನ್ನ ತಂದೆಯ ಮನೆಯನ್ನು ಬಿಡುವಂತೆ ನೀವು ನನಗೆ ಒತ್ತಾಯ ಮಾಡಿದಿರಿ; ನೀವು ನನ್ನನ್ನು ದ್ವೇಷಿಸುತ್ತೀರಿ. ಆದರೆ ಕಷ್ಟದಲ್ಲಿ ನೀವು ನನ್ನ ಬಳಿಗೆ ಬರುವುದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು
Kannada BSI Bible 2016
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರಿಗೆ - ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ ಅನ್ನಲು
Kannada Bible (KNCL) BSI 2016
ಅವನು ಅವರಿಗೆ, “ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೇ? ನಿಮಗೆ ಕಷ್ಟಬಂದಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನೀವಲ್ಲವೇ ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಹೊರಡಿಸಿದವರು? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.