Judges 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ನಾಯಕನಾಗುವೆ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.
Kannada BSI Bible 2016
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಆದದರಿಂದಲೇ ಈಗ ತಿರಿಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ಶಿರಸ್ಸಾಗಿರುವಿ ಎಂದು ಹೇಳಿದರು.
Kannada Bible (KNCL) BSI 2016
ಅವರು, “ಆದುದರಿಂದಲೇ ಈಗ ಪುನಃ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೆ ಶಿರಸ್ಸಾಗಿರುವೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು.