Judges 11:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನಾನು ಗಿಲ್ಯಾದಿಗೆ ಹಿಂದಿರುಗಿ ಬಂದು ಅಮ್ಮೋನಿಯರ ವಿರುದ್ಧ ಯುದ್ಧಮಾಡಬೇಕೆಂದು ನೀವು ಅಪೇಕ್ಷಿಸುವುದೇನೋ ಒಳ್ಳೆಯದು. ಆದರೆ ಯೆಹೋವನ ಕೃಪೆಯಿಂದ ನಾನು ಗೆದ್ದರೆ ನಾನು ನಿಮಗೆ ಹೊಸ ನಾಯಕನಾಗುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು
Kannada BSI Bible 2016
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಪ್ತಾಹನು ಅವರಿಗೆ - ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ ಎಂದು ಕೇಳಲು
Kannada Bible (KNCL) BSI 2016
ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕಾಗಿ ಕರೆದುಕೊಂಡು ಹೋಗುವುದಾದರೆ ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನೀವು ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ನೀವು ತಿರುಗಿ ನನ್ನನ್ನು ಮನೆಗೆ ಕರೆತಂದರೆ ಮತ್ತು ಯೆಹೋವ ದೇವರು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ, ನಾನು ನಿಮಗೆ ತಲೆಯಾಗಿರುವೆನೋ?” ಎಂದನು.