Judges 12:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.
Kannada BSI Bible 2016
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ಯರು ಕೂಡಿಕೊಂಡು ಯೊರ್ದನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋಗಿ ಅವನಿಗೆ - ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ ಅಂದರು.
Kannada Bible (KNCL) BSI 2016
ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮನ ಜನರು ಕೂಡಿಕೊಂಡು ಉತ್ತರದ ಜಪೋನಿಗೆ ಹೋಗಿ, ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಹೋದಾಗ, ನಮ್ಮನ್ನು ಏಕೆ ನಿನ್ನ ಸಂಗಡ ಹೋಗಲು ಕರೆಕಳುಹಿಸಲಿಲ್ಲ? ನಾವು ನಿನ್ನ ಮನೆಯನ್ನು ನಿನ್ನನ್ನು ಸಹಿತವಾಗಿ ಬೆಂಕಿಯಿಂದ ಸುಟ್ಟುಬಿಡುತ್ತೇವೆ,” ಎಂದರು.