Judges 12:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ದೋನನಿಗೆ ನಲವತ್ತು ಮಕ್ಕಳೂ ಮೂವತ್ತು ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಅಬ್ದೋನನು ಎಂಟು ವರ್ಷ ಇಸ್ರೇಲರಿಗೆ ನ್ಯಾಯಾಧೀಶನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;
Kannada BSI Bible 2016
ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್‌ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರನ್ನು ಎಂಟು ವರುಷ ಪಾಲಿಸಿದನಂತರ ಮರಣಹೊಂದಿದನು;
Kannada Bible (KNCL) BSI 2016
ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು.