Judges 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,
Kannada BSI Bible 2016
ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸಹಾಯಮಾಡುವದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು; ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವದೇಕೆ ಎಂದು ಉತ್ತರಕೊಟ್ಟು
Kannada Bible (KNCL) BSI 2016
ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.