Judges 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.
Kannada BSI Bible 2016
ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್‌ ಅನ್ನಬೇಕು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು.
Kannada Bible (KNCL) BSI 2016
ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.