Judges 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.
Kannada BSI Bible 2016
ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್‌ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಲ್ಲವೆಂದರೆ ಅವನಿಗೆ - ನೀನು ಷಿಬ್ಬೋಲೆತ್ ಅನ್ನು ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಹತರಾದರು.
Kannada Bible (KNCL) BSI 2016
ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.