Judges 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.
Kannada BSI Bible 2016
ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.
Kannada Bible (KNCL) BSI 2016
ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.