Judges 13:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.
Kannada BSI Bible 2016
ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು ಅಂದನು. ಅವನು ಯೆಹೋವನ ದೂತನೆಂಬದು ಮಾನೋಹನಿಗೆ ಗೊತ್ತಿದ್ದಿಲ್ಲ.
Kannada Bible (KNCL) BSI 2016
“ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ, ನಾನು ನಿನ್ನ ರೊಟ್ಟಿಯನ್ನು ತಿನ್ನುವುದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ, ಅದನ್ನು ಯೆಹೋವ ದೇವರಿಗೆ ಅರ್ಪಿಸಬೇಕು,” ಎಂದನು.