Judges 13:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮಾನೋಹನು ಯೆಹೋವನ ದೂತನಿಗೆ, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ. ನಿನ್ನ ಹೆಸರೇನು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಅವನು ಆ ದೂತನನ್ನು, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು” ಎಂದು ಕೇಳಿದನು.
Kannada BSI Bible 2016
ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅವನು ಆ ದೂತನನ್ನು - ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು ಎಂದು ಕೇಳಿದನು.
Kannada Bible (KNCL) BSI 2016
ಆದುದರಿಂದ ಅವನು ಆ ದೂತನನ್ನು, “ನೀವು ಹೇಳಿದ್ದು ನೆರವೇರಿದಾಗ ನಿಮ್ಮನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿಮ್ಮ ಹೆಸರೇನು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವನು ಯೆಹೋವ ದೇವರ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಯೆಹೋವ ದೇವರ ದೂತನಿಗೆ, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ನಿನ್ನನ್ನು ಘನಪಡಿಸುವ ಹಾಗೆ ನಿನ್ನ ಹೆಸರೇನು?” ಎಂದನು.